ಚಿಕಿತ್ಸೆ ನಿರಾಕರಿಸಿದರೆ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ
ಬೆಳಗಾವಿ: ಆಯುಷ್ಮಾನ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂಥವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ..
ಶಾಸಕ ಹರತಾಳ್ ಹಾಲಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ಮಾನ್ ಕಾರ್ಡ್ ಹೊಂದಿರುವವರಿಗೆ ಆಸ್ಪತ್ರೆಗಳು ಕಡ್ಡಾಯವಾಗಿ ಚಿಕಿತ್ಸೆಯನ್ನು ಕೊಡಲೇಬೇಕು. ಒಂದು ವೇಳೆ ಯಾರಾದರೂ ಚಿಕಿತ್ಸೆ ಕೊಡಲು ನಿರಾಕರಿಸಿರುವುದು ನನ್ನ ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ಜರುಗಿಸುತ್ತೇನೆ ಎಂದು ಎಚ್ಚರಿಸಿದರು.
ಆಯುಷ್ಮಾನ್ ಕಾರ್ಡ್ ಪಡೆಯಬೇಕಾದರೆ ಜಿಲ್ಲಾಸ್ಪತ್ರೆಗಳಿಂದ ಶಿಫಾರಸು ಪತ್ರ ಕಡ್ಡಾಯ ಮಾಡಲಾಗಿದೆ. ಆಯುಷ್ಮಾನ್ ಭಾರತ ಆರೋಗ್ಯ , ಕರ್ನಾಟಕ ಯೋಜನೆಯಡಿ 1650 ಚಿಕಿತ್ಸೆ ಪ್ಯಾಕೇಜ್‌ಗಳಲ್ಲಿ 171 ತುರ್ತು ಚಿಕಿತ್ಸೆ ವಿಧಾನಗಳನ್ನು ಪಡೆಯಬಹುದು. ನೊಂದಾಯಿತ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಚಿಕಿತ್ಸೆ ನೀಡಬೇಕು. ವಿಶೇಷವಾಗಿ ತುರ್ತು ಸಂದರ್ಭಗಳಲ್ಲಿ ಯಾವುದೇ ಶಿಫಾರಸು ಪತ್ರ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಕಡ್ಡಾಯವಾಗಿ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಲಾಗಿದೆ ಎಂದರು.
ತುರ್ತು ಚಿಕಿತ್ಸಾ ಅವಶ್ಯಕತೆ ಇಲ್ಲದ ಸಂದರ್ಭದಲ್ಲಿ ಕಂಪ್ಯೂಟರ್ ಆಧಾರಿತ ಆನ್‌ಲೈನ್ ರೆಫೆರೆನ್ಸ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದು ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯ ಅನುಷ್ಠಾನ ಮಾಡಿದೆ ಎಂದು ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…