ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕ್ಯಾಪ್ಟರ್ ಸೌಲಭ್ಯ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಜನರಿಗೆ ಇನ್ಮುಂದೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಲಾಗಿದೆ. ಹೌದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಸ್ಸು ಟ್ಯಾಕ್ಸಿ ಕ್ಯಾಬ್ ಮಾತ್ರವಲ್ಲದೆ ಜುಲೈ ತಿಂಗಳಿನಿಂದ ಒಂದು ಕಡೆ ಪಯಣಕ್ಕೆ 4000 ದರವನ್ನು ನೀಡಿ ಹೆಲಿಕ್ಯಾಪ್ಟರ್ ನಲ್ಲಿ ಪ್ರಯಾಣಿಸಬಹುದಾಗಿದೆ.

ಟ್ರಾಫಿಕ್ ಸಮಸ್ಯೆಯಿಂದ ಬೇಸತ್ತಿದ್ದ ಜನತೆಗೆ ಒಂದೂವರೆಯಿಂದ ಎರಡು ಗಂಟೆಗಳು ಉಳಿತಾಯ ಮಾಡುವಂತಹ ಈ ಸೌಲಭ್ಯವು ವಿಮಾನ ನಿಲ್ದಾಣದ ಟರ್ಮಿನಲ್ ಎಲೆಕ್ಟ್ರಾನಿಕ್ ಸಿಟಿ ಮತ್ತು ಹಳೆ ಎಚ್ಎಎಲ್ ಏರ್ಪೋರ್ಟ್ಗೆ ಬೆಳಿಗ್ಗೆ ಮತ್ತು ಸಂಜೆ ಎರಡು ಬಾರಿ ಹೆಲಿಕಾಪ್ಟರ್ ಸೇವೆ ಒದಗಿಸಲು ಬ್ಲೇಡ್ ಇಂಡಿಯಾ ನಿರ್ಧರಿಸಿದೆ. ಒಂದು ಕಡೆ ಪ್ರಯಾಣಕ್ಕೆ 4000 ದರವನ್ನು ನಿಗದಿ ಮಾಡಲಾಗಿದೆ ಎಂದು ಬ್ಲೇಡ್ ಇಂಡಿಯಾ ಕಂಪನಿಯ ನಿರ್ದೇಶಕರಿಗೆ ತಿಳಿಸಿದ್ದಾರೆ.