ಹೀಗೊಂದು ಸೌಹಾರ್ದಯುತ ಬಕ್ರೀದ್!

ಮೈಸೂರು: ಬಕ್ರೀದ್ ಹಬ್ಬದ ಅಂಗವಾಗಿ ಕೃಷ್ಣರಾಜ ಯುವ ಬಳಗದ ವತಿಯಿಂದ ನಂಜುಮಳಿಗೆಯಲ್ಲಿರುವ ಗೋಪಾಲಸ್ವಾಮಿ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಹಿಂದೂ ಮುಸಲ್ಮಾನರು ಒಟ್ಟಿಗೆ ಅರ್ಥಪೂರ್ಣವಾಗಿ ಹಬ್ಬ ಆಚರಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಲಾಕ್‌ಡೌನ್ ಸಂದರ್ಭದಲ್ಲಿ ಮುಸಲ್ಮಾನ್ ಬಾಂಧವರು ನಮ್ಮೊಡನೆ ಸೇರಿ ಸಾಕಷ್ಟು ಸೇವಾ ಕಾರ್ಯಗಳನ್ನು ಮಾಡಿದ್ದಾರೆ. ಇತಿಹಾಸದಲ್ಲಿ ಎರಡು ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ದಯುತವಾಗಿ ಆಚರಣೆ ಮಾಡುವ ಪದ್ಧತಿ ಇದೆ. ಆದರೆ ಕೆಲವು ಕಿಡಿಗೇಡಿಗಳಿಂದ ಎರಡು ಸಮಾಜದಲ್ಲಿ ಶಾಂತಿಯನ್ನು ಕದಡುವ ಯತ್ನಗಳು ನಡೆಯುತ್ತಿದೆ ಎಂದರು.

× Chat with us