ಸದ್ಯದಲ್ಲೇ ತೈಲ ಬೆಲೆ ಕಡಿಮೆಯಾಗಲಿದೆ: ಸಚಿವ ಅಶ್ವತ್ಥ ನಾರಾಯಣ

ಮಂಡ್ಯ: ಸದ್ಯದಲ್ಲೇ ತೈಲ ಬೆಲೆ ಕಡಿಮೆಯಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.
ನಗರಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳಕ್ಕೆ ಬಿಜೆಪಿ ಕಾರಣವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಾಗಿರುವುದರಿಂದ ಅನಿವಾರ್ಯವಾಗಿ ಬೆಲೆ ಹೆಚ್ಚಳ ಮಾಡಲಾಗಿದೆ. ಸದ್ಯದಲ್ಲೇ ಬೆಲೆ ಕಡಿಮೆಯಾಗಲಿದೆ. ಜನಸಾಮಾನ್ಯರ ಹಿತಕಾಯಲು ಬೆಲೆ ಕಡಿಮೆ ಮಾಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಕೋವಿಡ್-೧೯ ಮಾರ್ಗಸೂಚಿುಂ ನಡುವೆಯೂ ಹಲವು ನಿಯಮಗಳನ್ನ ಸಡಿಲಗೊಳಿಸಿ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದೆ. ಪ್ರಸ್ತುತ ೫ ದಿನಗಳ ಹಬ್ಬ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕಿಂತ ಇನ್ನೆನು ಮಾಡಲು ಸಾಧ್ಯ ಎಂದರು.  ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ, ಬಿಜೆಪಿ ನಗರಾಧ್ಯಕ್ಷ ವಿವೇಕ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿದ್ದರಾಮಯ್ಯ, ಯುವ ಮುಖಂಡ ಕೇಶವ್ ಇದ್ದರು.
× Chat with us