ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಕನ್ನಡಿಗ ಸ್ಟುವರ್ಟ್‌ ಬಿನ್ನಿ

ಬೆಂಗಳೂರು: ಭಾರತ ತಂಡದ ಕ್ರಿಕೆಟ್ ಆಟಗಾರ ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ ಅಂತರರಾಷ್ಟ್ರೀಯ ಕ್ರಿಕೆಟ್ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ʻನನ್ನ ಕ್ರಿಕೆಟ್‌ ಜೀವನದ ಪ್ರಯಾಣ ಅಭೂತಪೂರ್ವಾಗಿತ್ತು. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ್ದಕ್ಕೆ ಹೆಮ್ಮೆ ಇದೆ. ಇದಕ್ಕಾಗಿ ಬಿಸಿಸಿಐ, ನನ್ನ ಕುಟುಂಬ ಸೇರಿದಂತೆ ಪ್ರತಿಯೊಬ್ಬರಿಗೂ ಆಭಾರಿಯಾಗಿರುತ್ತೇನೆʼ ಎಂದು ಪತ್ರಿಕಾ ಪ್ರಕಟಣೆ ಮೂಲಕ ಸ್ಟುವರ್ಟ್‌ ಹೇಳಿದ್ದಾರೆ.

ಬೆಂಗಳೂರಿನ 37 ವರ್ಷದ ಸ್ಟುವರ್ಟ್ ಬಿನ್ನಿ 2014 ರಲ್ಲಿ ಟೀಮ್ ಇಂಡಿಯಾ ಪ್ರವೇಶಿಸಿದ್ದರು. 6 ಟೆಸ್ಟ್‌ ಪಂದ್ಯ, 14 ಏಕದಿನ ಅಂತರರಾಷ್ಟ್ರೀಯ ಪಂದ್ಯ, 3 ಅಂತರರಾಷ್ಟ್ರೀಯ ಟಿ20 ಪಂದ್ಯ, 150 ಐಪಿಎಲ್ ಪಂದ್ಯ ಹಾಗೂ 100 ಕ್ಕೂ ಹೆಚ್ಚು ದೇಶಿ ಕ್ರಿಕೆಟ್ ಟೂರ್ನಿಗಳನ್ನು ಆಡಿದ್ದಾರೆ. ಉತ್ತಮ ಆಲ್‌ರೌಂಡರ್ ಆಗಿದ್ದ ಇವರು ಐಪಿಎಲ್‌ನಲ್ಲಿ ಆರ್‌ಸಿಬಿ, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡದಲ್ಲಿ ಆಡಿದ್ದಾರೆ.

ಇವರ ತಂದೆ ರೋಜರ್‌ ಬಿನ್ನಿ ಕೂಡ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

× Chat with us