ಜಪಾನ್: ಹೊಸ ವರ್ಷದ ಮೊಲದ ದಿನವೇ ಜಪಾನ್ ನಲ್ಲಿ ತೀವ್ರ ಭೂಕಂಪನ ಉಟಾಗಿದ್ದು, ದಿನವೊಂದರಲ್ಲಿಯೇ 155 ಬಾರಿ ಭೂಮಿ ಕಂಪಿಸಿದೆ. ಇದರ ಪರಿಣಾಮ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದಾರೆ.
ವರ್ಷದ ಮೊಲದ ದಿನವೇ ಜಪಾನ್ ನಲ್ಲಿ ಪ್ರಬಲ ಭೂಕಂಪ ಸಂಭಿವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ವರೆಗೆ ಭೂ ಕಂಪಿಸಿದೆ. ಜಪಾನ್‌ನ ಈಶಾನ್ಯ ಭಾಗದ ನನಾವೋ ಭೂಕಂಂಪನದ ಕೇಂದ್ರ ಬಿಂದುವಾಗಿದೆ ಎಂದು ವರದಿಯಾಗಿದೆ.
ಕಂಪನದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 32 ಸಾವಿರಕ್ಕೂ ಅಧಿಕ ಮಂದಿ ಕಂಪನದಿಂದ ಸಂತ್ರಸ್ಥರಾಗಿದ್ದಾರೆ.
ಭೂಕಂಪನದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು, ವರ್ಷದ ಮೊದಲ ದಿನವೇ ಸೆಂಟ್ರಲ್ ಜಪಾನ್ ನ ನಾಗರೀಕರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗುವಂತಾಗಿದೆ. ಜಪಾನ್ ಮಿಲಿಟರಿ ಬೇಸ್ ನಲ್ಲಿ ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಟೋಕಿಯೊ ಮತ್ತು ಇಡೀ ಕಾಂಟೊ ಪ್ರದೇಶದಲ್ಲಿ ಕಂಪನಗಳು ಸಂಭವಿಸಿವೆ. 2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿದೆ. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…