ಅಂತಾರಾಷ್ಟ್ರೀಯ

ಜಾಪನ್‌ನಲ್ಲಿ ಒಂದೇ ದಿನ 155 ಬಾರಿ ಭೂಕಂಪನ: ಕನಿಷ್ಠ 8 ಸಾವು

ಜಪಾನ್‌: ಹೊಸ ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ತೀವ್ರ ಭೂಕಂಪನ ಉಟಾಗಿದ್ದು, ದಿನವೊಂದರಲ್ಲಿಯೇ 155 ಬಾರಿ ಭೂಮಿ ಕಂಪಿಸಿದೆ. ಇದರ ಪರಿಣಾಮ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದಾರೆ.

ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ಪ್ರಬಲ ಭೂಕಂಪ ಸಂಭಿವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ವರೆಗೆ ಭೂ ಕಂಪಿಸಿದೆ. ಜಪಾನ್‌ನ ಈಶಾನ್ಯ ಭಾಗದ ನನಾವೋ ಭೂಕಂಂಪನದ ಕೇಂದ್ರ ಬಿಂದುವಾಗಿದೆ ಎಂದು ವರದಿಯಾಗಿದೆ.

ಕಂಪನದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 32 ಸಾವಿರಕ್ಕೂ ಅಧಿಕ ಮಂದಿ ಕಂಪನದಿಂದ ಸಂತ್ರಸ್ಥರಾಗಿದ್ದಾರೆ.

ಭೂಕಂಪನದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು, ವರ್ಷದ ಮೊದಲ ದಿನವೇ ಸೆಂಟ್ರಲ್ ಜಪಾನ್ ನ ನಾಗರೀಕರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗುವಂತಾಗಿದೆ. ಜಪಾನ್ ಮಿಲಿಟರಿ ಬೇಸ್ ನಲ್ಲಿ ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಟೋಕಿಯೊ ಮತ್ತು ಇಡೀ ಕಾಂಟೊ ಪ್ರದೇಶದಲ್ಲಿ ಕಂಪನಗಳು ಸಂಭವಿಸಿವೆ. 2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿದೆ. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.

andolanait

Share
Published by
andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago