Mysore
21
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಚೀನಾದಲ್ಲಿ 7.2 ರಷ್ಟು ಭೂಕಂಪ: ರಾಷ್ಟ್ರ ರಾಜಧಾನಿಯಲ್ಲೂ ಕಂಪನ ಅನುಭವ

ನವದೆಹಲಿ: ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯ ಕೆಲವು ಪ್ರದೇಶದಲ್ಲಿಯೂ ಪ್ರಬಲ ಭೂಕಂಪನದ ಅನುಭವವಾಗಿದೆ.

ಇಂದು ರಾತ್ರಿ 11 ಗಂಟೆಯ ಸುಮಾರಿಗೆ ಚೀನಾದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿಯಲ್ಲೂ ಭೂಮಿ ಕಂಪಿಸಿದೆ. ಯಾವುದೇ ಗಾಯ ಅಥವಾ ನಷ್ಟದ ಬಗ್ಗೆ ವರದಿಯಾಗಿಲ್ಲ. 80 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ.

ಜನವರಿ 11 ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಪರಿಣಾಮ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿತ್ತು.

https://x.com/NCS_Earthquake/status/1749500398644392085?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!