ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂಕಂಪನದ ಕೇಂದ್ರ ಬಿಂದು ವರದಿಯಾಗಿದೆ.
ಜಪಾನ್ ನ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದೆ. 5 ಮೀಟರ್ (16 ಅಡಿ) ಎತ್ತರದವರೆಗೆ ಅಲೆಗಳು ಬರುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
2011 ರಲ್ಲಿ 9 ತೀವ್ರತೆಯ ವಿನಾಶಕಾರಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.





