ಕೊರೊನಾದ ಹೊಸ ರೂಪಾಂತರಿ ಜೆಎನ್1 ಮತ್ತು ಇನ್ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.
ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್ ಮತ್ತೆ ಭೀತಿ ಹುಟ್ಟಿಸಿದೆ. ಇದರ ಬೆನ್ನಲ್ಲೇ ಕೋವಿಡ್ ಪ್ರಕರಣಗಳ ಮೇಲೆ ಎಲ್ಲಾ ರಾಷ್ಟ್ರಗಳು ನಿಗಾ ಇಡಬೇಕು ಎಂದು ಡಬ್ಲ್ಯೂಎಚ್‌ಒ ಸೂಚನೆ ನೀಡಿದೆ.
ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ತ್ವರಿತಗತಿಯಲ್ಲಿ ಏರಿಕೆ ಕಂಡುಬಂದಿದೆ. ಏತನ್ಮಧ್ಯೆ, ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದ್ದು,. ಪಾಸಿಟಿವಿ ರೇಟ್ 7.35 % ಆಗಿದೆ.
ಹೋಂ ಐಸೋಲೇಷನ್ ಕಡ್ಡಾಯಗೊಳಿಸುವುದು, ಕ್ವಾರಂಟೈನ್ ಆದವರ ಮೇಲೆ ಹೆಚ್ಚು ನಿಗಾ ಇಡುವುದು, ಕೋವಿಡ್ ಟೆಸ್ಟ್ ಹೆಚ್ಚಳ, ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡುವುದು ಹಾಗೂ ಆಕ್ಸಿಜನ್, ವೆಂಟಿಲೇಟರ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲು ಉದ್ದೇಶಿಸಿದೆ.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…