ಅಂತಾರಾಷ್ಟ್ರೀಯ

ಎಲ್ಲಾ ರಾಷ್ಟ್ರಗಳು ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡಿ:  ಡಬ್ಲ್ಯೂಎಚ್‌ಒ

ಕೊರೊನಾದ ಹೊಸ ರೂಪಾಂತರಿ ಜೆಎನ್​1 ಮತ್ತು ಇನ್​ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.

ಕ್ರಿಸ್‌ಮಸ್‌​ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್‌ ಮತ್ತೆ ಭೀತಿ ಹುಟ್ಟಿಸಿದೆ. ಇದರ ಬೆನ್ನಲ್ಲೇ ಕೋವಿಡ್‌ ಪ್ರಕರಣಗಳ ಮೇಲೆ ಎಲ್ಲಾ ರಾಷ್ಟ್ರಗಳು ನಿಗಾ ಇಡಬೇಕು ಎಂದು ಡಬ್ಲ್ಯೂಎಚ್‌ಒ ಸೂಚನೆ ನೀಡಿದೆ.

ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ತ್ವರಿತಗತಿಯಲ್ಲಿ ಏರಿಕೆ ಕಂಡುಬಂದಿದೆ. ಏತನ್ಮಧ್ಯೆ, ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದು, ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದ್ದು,. ಪಾಸಿಟಿವಿ ರೇಟ್‌ 7.35 % ಆಗಿದೆ.

ಹೋಂ ಐಸೋಲೇಷನ್ ಕಡ್ಡಾಯಗೊಳಿಸುವುದು, ಕ್ವಾರಂಟೈನ್ ಆದವರ ಮೇಲೆ ಹೆಚ್ಚು ನಿಗಾ ಇಡುವುದು, ಕೋವಿಡ್ ಟೆಸ್ಟ್ ಹೆಚ್ಚಳ, ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡುವುದು ಹಾಗೂ ಆಕ್ಸಿಜನ್, ವೆಂಟಿಲೇಟರ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲು ಉದ್ದೇಶಿಸಿದೆ.

andolanait

Share
Published by
andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

14 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

17 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

18 hours ago