ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿರುವ ಫಿಲಿಪ್ ಐಲ್ಯಾಂಡ್‌ನಲ್ಲಿ ನಾಲ್ವರು ಭಾರತೀಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕ್ಯಾನ್ ಬೆರ್ರಾದ ಭಾರತೀಯ ಕಮಿಷನ್ ಸಾವಿನ ದುರಂತದ ಕುರಿತು ಮಾಹಿತಿಯನ್ನು ನೀಡಲಾಗಿದ್ದು, ಸಂತ್ರಸ್ತರು ಮತ್ತು ಕುಟುಂಬಸ್ಥರನ್ನು ಸಂಪರ್ಕಿಸಲಾಗುತ್ತಿದೆ ಎಂದು ಹೇಳಿದೆ.
ಸಮುದ್ರದಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು ಜೀವ ರಕ್ಷಕರು ಯತ್ನಿಸಿದರು. ಆದರೆ ಅಷ್ಟರಲ್ಲಾಗಲೇ ಮೂವರು ಮೃತಪಟ್ಟಿದ್ದರು. ಓರ್ವ ಯುವತಿಯನ್ನು ರಕ್ಷಿಸಿದ್ದು, ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಇವರು ಮೆಲ್ಬೋರ್ನ್ ನ ನಿವಾಸಿಯ ಸಂಬಂಧಿಕರ ಮನೆಗೆ ಆಗಮಿಸಿದ್ದರು ಎನ್ನಲಾಗಿದೆ.
2018 ರಲ್ಲಿ ಆಸ್ಟ್ರೇಲಿಯಾದ ಮೂನೀ ಬೀಚ್‌ನಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದರು.