ಅಂತಾರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ ಟರ್ಮಿನಲ್-2 ವಿಶ್ವದಲ್ಲೇ ಅತ್ಯಂತ ಸುಂದರ: ಯುನೆಸ್ಕೊ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ವಿಶ್ವದ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದು ಎನ್ನುವ ಹಿರಿಮೆಗೆ ಪಾತ್ರವಾಗಿದೆ.

ಯುನೆಸ್ಕೋದ ಪ್ರಿಕ್ಸ್ ವೆರ್ಸೆಲೈಸ್, ʼವಿಶ್ವ ಶ್ರೇಷ್ಠ ಒಳಾಂಗಣಕ್ಕೆ ವಿಶೇಷ ಬಹುಮಾನ-2023ʼ ನೀಡಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್) ಗುರುವಾರ ತಿಳಿಸಿದೆ.

ಇಂಥ ಗೌರವಕ್ಕೆ ಪಾತ್ರವಾದ ದೇಶದ ಏಕೈಕ ವಿಮಾನ ನಿಲ್ದಾಣವೂ ಇದೇ ಆಗಿದೆ.

2,55,661 ಚದರ ಮೀಟರ್ ವಿಸ್ತೀರ್ಣದ ಈ ಟರ್ಮಿನಲ್‌ನಲ್ಲಿ, ತೂಗುವ ಉದ್ಯಾನ ಹಾಗೂ ಹೊರಾಂಗಣ ಉದ್ಯಾನ ಇದೆ. ಇದರಲ್ಲಿ ಪ್ರಯಾಣಿಕರು ನಡೆದಾಡಬಹುದು ಕೂಡ. ಇಡೀ ಏರ್‌ಪೋರ್ಟ್‌ನಲ್ಲಿ ಮರುಬಳಕೆ ಮಾಡಬಹುದಾದ ಇಂಧನವನ್ನು ಬಳಸಲಾಗಿದೆ.

ಟರ್ಮಿನಲ್-2ರ ಮೊದಲ ಹಂತವನ್ನು 2022ರ ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದರು. ವಾರ್ಷಿಕವಾಗಿ 2.5 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.

andolanait

Share
Published by
andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

6 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

7 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

8 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

8 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

8 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

8 hours ago