ಅಂತಾರಾಷ್ಟ್ರೀಯ

ನೇಪಾಳದಲ್ಲಿ ಬಸ್‌ ಅಪಘಾತ: ಭಾರತೀಯರು ಸೇರಿ ೧೨ ಮಂದಿ ಸಾವು

ಕಠ್ಮಂಡು: ನೇಪಾಳದ ಡಾಂಗ್‌ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯರು ಸೇರಿ ೧೨ ಮಂದಿ ಸಾವಿಗೀಡಾಗಿದ್ದಾರೆ.

ಈ ಅಪಘಾತ ಕುರಿತು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ನೀಡಿವೆ.

ಬಾಂಕೆ ಜಿಲ್ಲೆಯ ನೇಪಾಳದಗಂಜ್ನಿಂದ ಕಠ್ಮಂಡುವಿಗೆ ಪ್ರಯಾಣ ಮಾಡುತ್ತಿದ್ದ ಬಸ್‌, ಜಿಲ್ಲೆಯ ಭಾಲುಬಾಂಗ್‌ ಸೇತುವೆಯಿಂದ ಕೆಳಜಾರಿ ರಾಪ್ತಿ ನದಿಗೆ ಉರುಳಿಬಿದ್ದಿದೆ.

ಈ ಅಪಘಾತದಲ್ಲಿ ೧೨ ಮಂದಿ ಮೃತಪಟ್ಟಿದ್ದು, ೨೨ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮರಣ ಹೊಂದಿದ ೧೨ ಮಂದಿಯಲ್ಲಿ ಇಬ್ಬರು ಭಾರತೀಯರು ಹಾಗೂ ಇಬ್ಬರು ಸ್ತಳೀಯರೆಂದು ಗುರುತಿಸಲಾಗಿದ್ದು ಉಳಿದ ೮ ಮಂದಿಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಈ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್‌ ಅಧಕಾರಿ ಉಜ್ವಲ್‌ ಬಹಾದುರ್‌ ಸಿಂಗ್‌ ತಿಳಿಸಿದ್ದಾರೆ.

andolanait

Share
Published by
andolanait

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

4 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

18 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

34 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

50 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago