ಟ್ರಾನ್ಪರೆನ್ಸಿ ಇಂಟರ್‌ನ್ಯಾಷನಲ್ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ 2023ರ ಪಟ್ಟಿಯನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿಯೂ ಸಹ ಡೆನ್‌ಮಾರ್ಕ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಭಾರತ 39 ಅಂಕಗಳನ್ನು ಪಡೆದು 93ನೇ ಸ್ಥಾನದಲ್ಲಿದೆ. ಕಳೆದ ಬಾರಿಯ ಪಟ್ಟಿಯಲ್ಲಿ 40 ಅಂಕಗಳನ್ನು ಪಡೆದುಕೊಂಡಿದ್ದ ಭಾರತ 85ನೇ ಸ್ಥಾನದಲ್ಲಿತ್ತು.
ಡೆನ್‌ಮಾರ್ಕ್ ಸತತ ಆರನೇ ಬಾರಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು ಕಡಿಮೆ ಭ್ರಷ್ಟಾಚಾರವಿರುವ ದೇಶವೆನಿಸಿಕೊಂಡರೆ, ಸೋಮಾಲಿಯಾ ದೇಶ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಅಂಕಗಳನ್ನು ನೀಡುವ ಮೂಲಕ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟಾರೆ ದೇಶಗಳ ಪಟ್ಟಿಯಲ್ಲಿ ಮೂರನೇ ಎರಡರಷ್ಟು ದೇಶಗಳು 50ಕ್ಕಿಂತ ಕಡಿಮೆ ಅಂಕಗಳನ್ನು ಪಡೆದುಕೊಂಡಿವೆ. ಫಿನ್‌ಲ್ಯಾಂಡ್ ಎರಡನೇ ಸ್ಥಾನ ಹಾಗೂ ನ್ಯೂಜಿಲೆಂಡ್ ಮೂರನೇ ಸ್ಥಾನಗಳನ್ನು ಪಡೆದುಕೊಂಡಿವೆ.
ಏಷ್ಯಾ ದೇಶಗಳ ಸ್ಥಾನಗಳೇನು?
ಭಾರತ 39 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಈ ಪಟ್ಟಿಯಲ್ಲಿ 93ನೇ ಸ್ಥಾನದಲ್ಲಿದ್ದು, 42 ಅಂಕಗಳನ್ನು ಪಡೆದುಕೊಂಡಿರುವ ಚೀನಾ 76ನೇ ಸ್ಥಾನದಲ್ಲಿದೆ. 29 ಅಂಕಗಳನ್ನು ಪಡೆದುಕೊಂಡಿರುವ ಪಾಕಿಸ್ತಾನ 133ನೇ ಸ್ಥಾನವನ್ನು ಪಡೆದುಕೊಂಡಿದೆ. 20 ಅಂಕಗಳನ್ನು ಪಡೆದುಕೊಂಡಿರುವ ಅಪ್ಘಾನಿಸ್ತಾನ 162ನೇ ಸ್ಥಾನದಲ್ಲಿದೆ. ಚೀನಾದ ಅಂಕ ಕಳೆದ ಪಟ್ಟಿಗೆ ಹೋಲಿಸಿದರೆ ಮೂರರಷ್ಟು ಕಡಿಮೆಯಾಗಿದೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…