ನವದೆಹಲಿ : ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ನೈಸರ್ಗಿಕ ಕಾರಣಗಳು ಮತ್ತು ಅಪಘಾತ ಸೇರಿದಂತೆ ೨೦೧೮ ರಿಂದ ಇದುವರೆಗೆ ೪೦೩ ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಟ್ಟು ೩೪ ರಾಷ್ಟ್ರಗಳಲ್ಲಿ ಭಾರತೀಯ ವಿದಾರ್ಥಿಗಳ ಸಾವಾಗಿದ್ದು, ಅದರಲ್ಲೂ ಕೆನಡಾ ದೇಶದಲ್ಲಿ ಹೆಚ್ಚು ಸಾವುಗಳು ಸಂಭವಿಸಿದೆ.
೨೦೧೮ ರಿಂದ ಇಲ್ಲಿಯವರೆಗೆ ವಿದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳು ೪೦೩ ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಅವರು ರಾಜ್ಯ ಸಭೆಯಲ್ಲಿ ಡೇಟಾ ಮಂಡಿಸಿದರು. ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯು ಭಾರತ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲಿ ಸರಿಯಾದ ತನಿಖೆ ಮತತು ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಅತಿಥೇಯ ದೇಶದ ಅಧಿಕಾರಿಗಳೊಂದಿಗೆ ತಕ್ಷಣವೇ ಮಾತನಾಡಲಾಗುವುದು.
ತುರ್ತು ವೈದ್ಯಕೀಯ ಆರೈಕೆ, ಬೋರ್ಡಿಂಗ್ ಮತ್ತು ಅಗತ್ಯ ವಸತಿ ಸೇವೆ ಒದಗಿಸಲು ಸಮಗ್ರ ಕಾನಸ್ಯಲರ್ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದರು.
ಈ ಮಾಹಿತಿಯ ಪ್ರಕಾರ ಕೆನಡಾದಲ್ಲಿ ಇದುವರೆಗೆ ಒಟ್ಟು ೯೧ ಭಾರತೀಯ ವಿದ್ಯಾರ್ಥಿಗಳು, ನಂತರದ ಸ್ಥಾನದಲ್ಲಿ ಯುನೈಟೆಡ್ ಕಿಂಗ್‌ಡಮ್ (ಯುಕೆ) ೪೮, ರಷ್ಯಾ ೪೦, ಯುನೈಟೆಡ್ ಸ್ಟೇಟ್ಸ್ ೩೬, ಆಸ್ಟ್ರೇಲಿಯಾ, ಉಕ್ರೇನ್ ೨೧, ಜರ್ಮನಿ ೨೦, ಸೈಪ್ರಸ್ ೧೪, ಇಟಲಿ ಮತ್ತು ಫಿಲಿಫೈನ್ಸ್ ದೇಶಗಳಲ್ಲಿ ತಲಾ ೧೦ ಮಂದಿ ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…
ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…