ಅಂತಾರಾಷ್ಟ್ರೀಯ

ಸೌದಿಯಿಂದ ಭಾರತಕ್ಕೆ ಬರುತ್ತಿದ ಹಡಗಿನ ಮೇಲೆ ಡ್ರೋನ್‌ ದಾಳಿ!

ನವದೆಹಲಿ: ಸೌದಿಯಿಂದ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ಡ್ರೋನ್‌ ದಾಳಿ ನಡೆದಿದೆ. ಗುಜರಾತ್‌ ವೆರಾವಲ್‌ ಕರಾವಳಿಯಿಂದ ಸುಮಾರು 217 ನಾಟಿಕಲ್‌ ಮೈಲಿ ದೂರ ಅರಬ್ಬಿ ಸಮುದ್ರದಲ್ಲಿ ಇಸ್ರೆಲ್‌ ಸಂಯೋಜಿತ ವ್ಯಾಪಾರಿ ಹಡಗೊಂದರ ಮೇಲೇ ಅಪರಿಚಿತ ಡ್ರೋನ್‌ ದಾಳಿ ಶನಿವಾರ ನಡೆದಿರುವುದು ವರದಿಯಾಗಿದೆ.

ತೈಲ ಟ್ಯಾಂಕುಗಳನ್ನು ಹೊತ್ತು ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಲೈಬೀರಿಯನ್‌ ಹಡಗಿನ ಮೇಲೆ ದಾಳಿಯಾಗಿದ್ದು, ಹಡಗಿಗೆ ಭಾಗಶಃ ಹಾನಿಯಾಗಿದೆ. ಕೆಲವೆಡೆ ನೀರು ನುಗ್ಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಘಟನೆಯ ಬಗ್ಗೆ ಇದುವರೆಗೆ ಭಾರತೀಯ ನೌಕಾದಳ ಯಾವುದೇ ತಕ್ಷಣದ ಪ್ರತಿಕ್ರಿಯೆ ನೀಡಲ್ಲ. ಹಾಗೇಯೇ ಡ್ರೋನ್‌ ದಾಳೀಯ ಹೊಣೆಯನ್ನು ಇವರೆಗೂ ಯಾರೂ ಹೊತ್ತುಕೊಂಡಿಲ್ಲ.

ಇಸ್ರೇಲ್‌, ಪ್ಯಾಲೆಸ್ಟೀನ್‌ ನಡುವೆ ಯುದ್ಧ ನಡೆಯುತ್ತಿರುವಾಗ ಇಸ್ರೇಲ್‌ ಹಡಗುಗಳ ಮೇಲೆ ಇರಾನ್‌ ಬೆಂಬಲಿರ ಹೌತಿ ಉಗ್ರರು ದಾಳಿ ಮಾಡಿದ್ದರು.

andolanait

Share
Published by
andolanait
Tags: drone attack

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

17 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago