ಅಂತಾರಾಷ್ಟ್ರೀಯ

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪ : ನಾಲ್ವರ ಸಾವು

ಅಫ್ಘಾನಿಸ್ತಾನ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ ಸಾವು -ನೋವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ ಎಂದು ಎಎನ್​​​ಡಿಎಮ್​​​ಎ ಹೇಳಿದೆ.

ಸೋಮವಾರ ನೀಡಿದ ವರದಿಗಳ ಪ್ರಕಾರ 2,400 ಜನ ಸಾವನ್ನಪ್ಪಿದರು ಎಂದು ಹೇಳಲಾಗಿತ್ತು. ಹೆರಾತ್‌ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ವರದಿ ಹೇಳಿತ್ತು. ಇನ್ನು ಎಎನ್-ಡಿಎಂಎ ಹೇಳಿರುವ ಪ್ರಕಾರ ದಿನದಿಂದ ದಿನಕ್ಕೆ ಭೂಕಂಪದಿಂದ ಸಾವನ್ನಪ್ಪಿರುವವ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ.

ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು. ಇದಕ್ಕೆ 12 ಆಂಬ್ಯುಲೆನ್ಸ್‌ಗಳನ್ನು ಕಳುಹಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿತ್ತು. ಅಫ್ಘಾನಿಸ್ತಾನದ ಹಂಗಾಮಿ ಪ್ರಧಾನಿ ಮೊಹಮ್ಮದ್ ಹಸನ್ ಅಖುಂಡ್ ಅವರು ಸೋಮವಾರ ಹೆರಾತ್ ಪ್ರಾಂತ್ಯದ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಅಧಿಕಾರಿಗಳಿಗೆ ಹೇಳಿದ್ದರು. ಇನ್ನು ಚೀನಾ ಭಾನುವಾರ ಅಫ್ಘಾನ್ ರೆಡ್ ಕ್ರೆಸೆಂಟ್‌ಗೆ 200,000 ಯುಎಸ್ (1,66,49,480.00) ಡಾಲರ್‌ಗಳನ್ನು ತುರ್ತು ಮಾನವೀಯ ನರೆವು ನೀಡಿದೆ.

 

lokesh

Share
Published by
lokesh

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

11 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

35 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

39 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

1 hour ago