ಇಸ್ಲಾಮಾಬಾದ್ : ಪಾಕಿಸ್ತಾನ ಮೂಲದ ಲಷ್ಕರ್ ತೋಯ್ಬಾ ಸಂಘಟನೆಯ ಹಿರಿಯ ಕಮಾಂಡರ್ ಅಕ್ರಂ ಖಾನ್ ಘಾಜಿ ಕೊಲೆ ಹಿನ್ನಲೆಯಲ್ಲೇ ಮತ್ತೊಬ್ಬ ಉಗ್ರನ ಹತ್ಯೆ ನಡೆದಿದೆ. ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಹಾಗೂ ಮೌಲಾನ್ ಮಸೂದ್ ಅಕರ್‌ನ ಆಪ್ತ ಸ್ನೇಹಿತ ಮೌಲಾನಾ ರಹೀಮ್ ಉಲ್ಲಾ ತಾರೀಖ್‌ನನ್ನು ಹತ್ತಿಕ್ಕಿ ಕೊಂದಿದ್ದಾರೆ.
ಕರಾಚಿಯಲ್ಲಿ ಭಾರತ ವಿರೋಧಿ ಸಮಾವೇಷದಲ್ಲಿ ಭಾಷಣ ಮಾಡಲು ತೆರಳುತ್ತಿದ್ದಾಗ ಕರಾಚಿಯ ಓರಂಗಿ ಪಟ್ಟಣ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ರಹೀಮ್ ಉಲ್ಲಾ ತಾರೀಖ್ ಓರ್ವ ಮೌಲಾನಾಗಿದ್ದು, ತನ್ನ ಭಾಷಣಗಳನ್ನು ಸಾವಿರಾರು ಜನರು ಸೇರುವ ಧಾರ್ಮಿಕ ಸಮಾವೇಶಗಳಲ್ಲಿ ಭಾರತ ವಿರೋಧಿ ಭಾಷಣ ಮಾಡುತ್ತಿದ್ದನು. ಜತೆಗೆ ಲಷ್ಕರ್ ಸಂಘಟನೆಗೆ ಯುವಕರನ್ನು ಪ್ರಚೋದಿಸುವುದು, ನೇಮಕ ಮಾಡುವ ಹೊಣೆಗಾರಿಕೆಯನ್ನು ನೋಡಿಕೊಳ್ಳುತ್ತಿದ್ದನು. ಭಾರತದ ಕಾಶ್ಮೀರಿ ಕಣಿವೆಯಲ್ಲಿ ಉಗ್ರರ ದಾಳಿಯಲ್ಲಿ ಈತನ ಪಾಲು ಇತ್ತು.
ಇಂದು ಅಪರಿವಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿ ಕೊಂದಿದ್ದು, ಈ ಹತ್ಯೆಗಳ ಹಿನ್ನಲೆ ನಿಗೂಢವಾಗಿಯೇ ಉಳಿದಿದೆ. ಮತ್ತು ಈ ದಾಳಿಗಳ ಬಗ್ಗೆ ಇದುವರೆಗೂ ಯಾವುದೇ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲದೇ ಇರುವುದು ಹಲವು ಕೌತುಕಗಳಿಗೆ ದಾರಿ ಮಾಡಿಕೊಟ್ಟಿದೆ.
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…