ಅಹ್ಮದಾಬಾದ್: ಇಂಡೋ- ಆಸೀಸ್ 4ನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿದ್ದರು.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್- ಗವಾಸ್ಕರ್ ಟ್ರೋಫಿಯ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ. ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಭರ್ಜರಿ ಆರಂಭ ಪಡೆದುಕೊಂಡಿದೆ. ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿದ್ದಾರೆ.
ಪಂದ್ಯ ಆರಂಭಕ್ಕೂ ಮುನ್ನವೇ ಪ್ರಧಾನಿಗಳು ಮೈದಾನಕ್ಕೆ ಪ್ರವೇಶಿಸಿ ಉಭಯ ತಂಡದ ನಾಯಕರಿಗೆ ಟೆಸ್ಟ್ ಕ್ಯಾಪ್ ಹಸ್ತಾಂತರಿಸಿದರು. ಮೋದಿ ಅವರು ನಾಯಕ ರೋಹಿತ್ ಶರ್ಮಾರಿಗೆ ಕ್ಯಾಪ್ ನೀಡಿದರೆ, ಆಸೀಸ್ ನಾಯಕ ಸ್ಟೀವನ್ ಸ್ಮಿತ್ರಿಗೆ ಅಲ್ಬನೀಸ್ ಅವರು ಗ್ರೀನ್ ಕ್ಯಾಪ್ ನೀಡಿದರು. ಇದೇವೇಳೇ ಇಬ್ಬರು ಪ್ರಧಾನಿಗಳು ಎರಡು ತಂಡಗಳ ಕ್ಯಾಪ್ಟನ್ಗಳಾದ ರೋಹಿತ್ ಶಾರ್ಮಾ ಹಾಗೂ ಸ್ಟಿವ್ ಸ್ಮಿತ್ ಅವರ ಕೈಗಳನ್ನ ಹಿಡಿದು ಮೇಲೆತ್ತಿ ಖುಷಿ ವ್ಯಕ್ತಪಡಿಸಿ ಶುಭಕೋರಿದರು.