೨ನೇ ಬಾರಿಗೆ ಪ್ರಧಾನಿಯಾಗಲಿರುವ ನೇತನ್ಯಾಹು
ಜೆರುಸಲೇಮ್: ಕಳೆದ ನಾಲ್ಕು ವರ್ಷಗಳಿಂದ ನಾಟಕೀಯ ರಾಜಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಗುತ್ತಿರುವ ಇಸ್ರೇಲ್ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಪಕ್ಷಕ್ಕೆ ಗೆಲುವಾಗಿದೆ. ಆ ಮೂಲಕ ಮತ್ತೆ ನೇತನ್ಯಾಹು ಅವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗುವುದು ಖಚಿತವಾಗಿದೆ.
೧೨೦ ಸಂಸತ್ ಕ್ಷೇತ್ರಗಳ ಪೈಕಿ ನೇತನ್ಯಾಹು ಹಾಗೂ ಅವರ ಬಲಪಂಥೀಯ ಮೈತ್ರಿ ಪಕ್ಷಗಳು ೬೪ ಕ್ಷೇತ್ರಗಳಲ್ಲಿ ಜಯ ಸಾಧಿಸಿವೆ. ನೇತನ್ಯಾಹು ಅವರು ಲಿಕುಡ್ ಪಕ್ಷ ೩೨ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ತೀವ್ರ ಬಲಪಂಥೀಯ ಪಕ್ಷಗಳು ೧೮ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಲಪಂಥೀಯ ರಾಜಕೀಯ ಪಕ್ಷಗಳು ೧೪ ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ ಎಂದು ಇಸ್ರೇಲ್ನ ಚುನಾವಣಾ ಅಯೋಗ ಮಾಹಿತಿ ನೀಡಿದೆ.
ಲ್ಯಾಪಿಡ್ ಪಕ್ಷ ಹಾಗೂ ಮೈತ್ರಿ ಪಕ್ಷಗಳು ೫೧ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಳೆದ ನಾಲ್ಕು ವರ್ಷದಲ್ಲಿ ಇಸ್ರೇಲ್ನಲ್ಲಿ ನಡೆದ ಐದನೇ ಸಾರ್ವತ್ರಿಕ ಚುನಾವಣೆ ಇದಾಗಿದ್ದು, ಯಾವ ಮೈತ್ರಿ ಕೂಟಕ್ಕೂ ಬಹುಮತ ಸಿಗದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರ ಪರಿಣಾಮ ೨ ವರ್ಷಗಳಲ್ಲಿ ಮೂರು ಪ್ರಧಾನ ಮಂತ್ರಿಗಳನ್ನು ಕಂಡಿತ್ತು.
ಇದೀಗ ಮತ್ತೆ ನಡೆದ ಚುನಾವಣೆಯಲ್ಲಿ ನೇತನ್ಯಾಹು ನೇತೃತ್ವದ ಬಲಪಂಥಿಯ ಪಕ್ಷಗಳಿಗೆ ಬಹುಮತ ಲಭಿಸಿದ್ದು, ಎರಡು ವರ್ಷಗಳ ಅವಧಿಯಲ್ಲಿ ನೇತನ್ಯಾಹು ಅವರು ಎರಡನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಅತೀ ಹೆಚ್ಚು ಅವಧಿಗೆ ದೇಶದ ಪ್ರಧಾನಿಯಾಗಿದ್ದ ಅವರು ಮತ್ತೊಮ್ಮೆ ಅಧಿಕಾರ ಸ್ವೀಕರಿಸಲಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.