ಅಂತಾರಾಷ್ಟ್ರೀಯ

ಗಾಜಾ ಮೇಲಿನ ದಾಳಿಯನ್ನು ಕೊಂಚ ಸಡಿಲಿಸಿದ ಇಸ್ರೇಲ್

ಟೆಲ್ ಅವಿವ್ : ಇಸ್ರೇಲ್-ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗಿ ತಿಂಗಳು ಕಳೆದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ದಾಳಿಗೆ ಇಸ್ರೇಲ್ ಇದೀಗ ಕೊಂಚ ವಿರಾಮಕ್ಕೆ ಒಪ್ಪಿದೆ. ದಿನಕ್ಕೆ 4 ಗಂಟೆ ಕದನ ವಿರಾಮವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೃಢಪಡಿಸಿದ್ದಾರೆ.

ಗಾಜಾದ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್ ಯುದ್ಧದ ವಲಯದಲ್ಲಿ ನೆಲೆಸಿರುವ ನಾಗರಿಕರನ್ನು ಸುರಕ್ಷಿತ ಪ್ರದೇಶಕ್ಕೆ ತೆರಳಲು ಅನುವುಮಾಡಿಕೊಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಯುದ್ಧಕ್ಕೆ ಸಂಪೂರ್ಣ ವಿರಾಮವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ದಿನದಲ್ಲಿ 20 ಗಂಟೆ ಯುದ್ಧ ನಡೆದರೆ 4 ಗಂಟೆ ದಾಳಿ ನಡೆಸುವುದಿಲ್ಲ ಎಂದು ನೆತನ್ಯಾಹು ತಿಳಿಸಿದ್ದಾರೆ.

ಆದರೆ ಹಮಾಸ್ ಉಗ್ರರ ವಿರುದ್ಧದ ದಾಳಿ ಎಂದಿಗೂ ನಿಲ್ಲುವುದಿಲ್ಲ. ಇಸ್ರೇಲ್‌ನ ದಾಳಿಯಿಂದಾಗಿ ಸಾಮಾನ್ಯ ಜನರಿಗೆ ತೊಂದರೆಯಾಗಬಾರದು ಎಂದು ಪ್ರತಿ ದಿನ 4 ಗಂಟೆ ದಾಳಿ ನಿಲ್ಲಿಸಲಾಗುತ್ತದೆ. ಆದರೆ ಹಮಾಸ್ ಉಗ್ರರ ವಿರುದ್ಧ ದಾಳಿ ಮುಂದುವರಿಯುತ್ತಲೇ ಇರುತ್ತದೆ. ನಾವು ಗಾಜಾ ನಗರವನ್ನು ವಶಪಡಿಸಿಕೊಳ್ಳಲು ಹಾಗೂ ಇಡೀ ನಗರದ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುತ್ತಿಲ್ಲ. ಆದರೆ ಉಗ್ರರನ್ನು ಮಾತ್ರ ಸುಮ್ಮನೆ ಬಿಡಲಾಗುವುದಿಲ್ಲ ಎಂದಿದ್ದಾರೆ.

ಇಸ್ರೇಲ್‌ನಲ್ಲಿ 1,400 ಜನರನ್ನು ಕೊಂದಿರುವ ಹಮಾಸ್ ಉಗ್ರರು ಇನ್ನು ಕೂಡಾ ಮಕ್ಕಳು, ವೃದ್ಧರು ಸೇರಿದಂತೆ 239 ಜನರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದಾರೆ ಎಂದು ಇಸ್ರೇಲ್‌ನ ಅಧಿಕಾರಿಗಳು ಹೇಳಿದ್ದಾರೆ. ಅವರಲ್ಲಿ ಸುಮಾರು 10 ಅಮೆರಿಕನ್ನರು ಸೇರಿದ್ದಾರೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾದ ಮೇಲಿನ ದಾಳಿಗೆ ಇಲ್ಲಿಯವರೆಗೆ 10,800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

lokesh

Share
Published by
lokesh
Tags: isrelwar

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago