Mysore
22
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕುವೈತ್‌ ಪ್ರವಾಸ: ಪ್ರಧಾನಿ ಮೋದಿಗೆ 20ನೇ ಅಂತರಾಷ್ಟ್ರೀಯ ಗೌರವ

ಕುವೈತ್‌/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್‌ ಮಿಶಾಲ್‌ ಅಲ್‌ ಅಹ್ಮದ್‌ ಅಲ್‌ ಜಾಬೆರ್‌ ಸಬಾ ಅವರು ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌ ಎಂಬ 20ನೇ ಅಂತರಾಷ್ಟ್ರೀಯ ಗೌರವ ನೀಡಿದೆ.

ಕುವೈತ್‌ನಲ್ಲಿ ಇಂದು(ಡಿಸೆಂಬರ್‌.22) ಕುವೈತ್‌ನ ರಾಜ ಶೇಕ್‌ ಮಿಶಾಲ್‌ ಅಲ್‌ ಅಹ್ಮದ್‌ ಅಲ್‌ ಜಾಬೆರ್‌ ಸಬಾ ಅವರು ಪ್ರಧಾನಿ ಮೋದಿ ಅವರಿಗೆ ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌ ಎಂಬ ಅತ್ಯುನ್ನತ ಗೌರವ ನೀಡಿ ಸನ್ಮಾನಿಸಿದ್ದಾರೆ.

ಈ ಗೌರವವನ್ನು ಕುವೈತ್‌ ದೇಶವೂ ವಿದೇಶಿ ಗಣ್ಯರಿಗೆ ಹಾಗೂ ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಲಾಗುತ್ತಿತ್ತು. ಆದರೆ ಈಗ ಇದೇ ಗೌರವವನ್ನು 43 ವರ್ಷಗಳ ನಂತರ ಭಾರತದಿಂದ ಕುವೈತ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ನೇಹದ ಸಂಕೇತವಾಗಿ ನೀಡಿ ಗೌರವಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿದ್ದಾರೆ.

ಈ ಹಿಂದೆ ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌ ಎಂಬ ಗೌರವವನ್ನು ಕುವೈತ್‌ ದೇಶ, ಅಮೆರಿಕಾ ಅಧ್ಯಕ್ಷ ಬಿಲ್‌ ಕ್ಲಿಂಟನ್‌, ಜಾರ್ಜ್‌ ಬುಷ್‌, ಬ್ರಿಟನ್‌ನ ರಾಜಕುಮಾರ ಚಾರ್ಲ್ಸ್‌ ಸೇರಿದಂತೆ ಅನೇಕ ವಿದೇಶಿ ನಾಯಕರಿಗೆ ಈ ಗೌರವ ನೀಡಿ ಸನ್ಮಾನಿಸಲಾಗಿತ್ತು.

Tags: