ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್ ಅಹ್ಮದ್ ಅಲ್ ಜಾಬೆರ್ ಸಬಾ ಅವರು ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ ಎಂಬ 20ನೇ ಅಂತರಾಷ್ಟ್ರೀಯ ಗೌರವ ನೀಡಿದೆ.
ಕುವೈತ್‌ನಲ್ಲಿ ಇಂದು(ಡಿಸೆಂಬರ್.22) ಕುವೈತ್‌ನ ರಾಜ ಶೇಕ್ ಮಿಶಾಲ್ ಅಲ್ ಅಹ್ಮದ್ ಅಲ್ ಜಾಬೆರ್ ಸಬಾ ಅವರು ಪ್ರಧಾನಿ ಮೋದಿ ಅವರಿಗೆ ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ ಎಂಬ ಅತ್ಯುನ್ನತ ಗೌರವ ನೀಡಿ ಸನ್ಮಾನಿಸಿದ್ದಾರೆ.
ಈ ಗೌರವವನ್ನು ಕುವೈತ್ ದೇಶವೂ ವಿದೇಶಿ ಗಣ್ಯರಿಗೆ ಹಾಗೂ ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಲಾಗುತ್ತಿತ್ತು. ಆದರೆ ಈಗ ಇದೇ ಗೌರವವನ್ನು 43 ವರ್ಷಗಳ ನಂತರ ಭಾರತದಿಂದ ಕುವೈತ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ನೇಹದ ಸಂಕೇತವಾಗಿ ನೀಡಿ ಗೌರವಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿದ್ದಾರೆ.
ಈ ಹಿಂದೆ ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ ಎಂಬ ಗೌರವವನ್ನು ಕುವೈತ್ ದೇಶ, ಅಮೆರಿಕಾ ಅಧ್ಯಕ್ಷ ಬಿಲ್ ಕ್ಲಿಂಟನ್, ಜಾರ್ಜ್ ಬುಷ್, ಬ್ರಿಟನ್‌ನ ರಾಜಕುಮಾರ ಚಾರ್ಲ್ಸ್ ಸೇರಿದಂತೆ ಅನೇಕ ವಿದೇಶಿ ನಾಯಕರಿಗೆ ಈ ಗೌರವ ನೀಡಿ ಸನ್ಮಾನಿಸಲಾಗಿತ್ತು.
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…