ಕೀವ್ : ರಷ್ಯಾ ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಖಾರ್ಕಿವ್‌ನ ಪೂರ್ವ ಪ್ರದೇಶದಲ್ಲಿ ಕಿರಾಣಿ ಅಂಗಡಿ ಮತ್ತು ಕೆಫೆಯ ಮೇಲೆ ಮಾಸ್ಕೋ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 49 ಮಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ರಷ್ಯಾದ ಗಡಿಯಲ್ಲಿರುವ ಯುದ್ಧ-ಪೀಡಿತ ಪ್ರದೇಶದ ಕುಪಿಯಾನ್ಸ್ಕ್ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೇಳಿದ್ದಾರೆ.
“ಒಂದು ಸಾಮಾನ್ಯ ಕಿರಾಣಿ ಅಂಗಡಿ ಮೇಲೆ ರಾಕೆಟ್ ದಾಳಿ ಮಾಡಿದ ರಷ್ಯಾದ ಈ ಕ್ರೂರ ಕೃತ್ಯ ಸಂಪೂರ್ಣವಾಗಿ ಉದ್ದೇಶಪೂರ್ವಕ ಭಯೋತ್ಪಾದಕ ದಾಳಿಯಾಗಿದೆ” ಎಂದು ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ರಷ್ಯಾ ದಾಳಿಯಲ್ಲಿ ಕನಿಷ್ಠ 49 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ಪ್ರಾಸಿಕ್ಯೂಟರ್ ಜನರಲ್ ಹೇಳಿದ್ದಾರೆ.
ಇಂದು ಮಧ್ಯಾಹ್ನ 1:15 (1015 GMT)ರ ಸುಮಾರಿಗೆ ಗ್ರೋಜಾ ಗ್ರಾಮದಲ್ಲಿರುವ ಕೆಫೆ ಮತ್ತು ಅಂಗಡಿ ಮೇಲೆ ದಾಳಿ ನಡೆಸಲಾಗಿದೆ ಎಂದು ಖಾರ್ಕಿವ್ ಪ್ರದೇಶದ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ಅವರು ತಿಳಿಸಿದ್ದಾರೆ.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…