ಅಂತಾರಾಷ್ಟ್ರೀಯ

ಪೂರ್ವ ಉಕ್ರೇನ್‌ ಮೇಲೆ ರಷ್ಯಾದಿಂದ ಕ್ಷಿಪಣಿ ದಾಳಿ: ಕನಿಷ್ಠ 49 ಮಂದಿ ಸಾವು

ಕೀವ್ : ರಷ್ಯಾ ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಖಾರ್ಕಿವ್‌ನ ಪೂರ್ವ ಪ್ರದೇಶದಲ್ಲಿ ಕಿರಾಣಿ ಅಂಗಡಿ ಮತ್ತು ಕೆಫೆಯ ಮೇಲೆ ಮಾಸ್ಕೋ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 49 ಮಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಷ್ಯಾದ ಗಡಿಯಲ್ಲಿರುವ ಯುದ್ಧ-ಪೀಡಿತ ಪ್ರದೇಶದ ಕುಪಿಯಾನ್ಸ್ಕ್ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೇಳಿದ್ದಾರೆ.

“ಒಂದು ಸಾಮಾನ್ಯ ಕಿರಾಣಿ ಅಂಗಡಿ ಮೇಲೆ ರಾಕೆಟ್‌ ದಾಳಿ ಮಾಡಿದ ರಷ್ಯಾದ ಈ ಕ್ರೂರ ಕೃತ್ಯ ಸಂಪೂರ್ಣವಾಗಿ ಉದ್ದೇಶಪೂರ್ವಕ ಭಯೋತ್ಪಾದಕ ದಾಳಿಯಾಗಿದೆ” ಎಂದು ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ರಷ್ಯಾ ದಾಳಿಯಲ್ಲಿ ಕನಿಷ್ಠ 49 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ಪ್ರಾಸಿಕ್ಯೂಟರ್ ಜನರಲ್ ಹೇಳಿದ್ದಾರೆ.

ಇಂದು ಮಧ್ಯಾಹ್ನ 1:15 (1015 GMT)ರ ಸುಮಾರಿಗೆ ಗ್ರೋಜಾ ಗ್ರಾಮದಲ್ಲಿರುವ ಕೆಫೆ ಮತ್ತು ಅಂಗಡಿ ಮೇಲೆ ದಾಳಿ ನಡೆಸಲಾಗಿದೆ ಎಂದು ಖಾರ್ಕಿವ್ ಪ್ರದೇಶದ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ಅವರು ತಿಳಿಸಿದ್ದಾರೆ.

andolanait

Share
Published by
andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago