ಅಂತಾರಾಷ್ಟ್ರೀಯ

ಇರಾನ್:‌ ಖಾಸಿಂ ಸುಲೇಮಾನಿ ಪುಣ್ಯಸ್ಮರಣೆ ವೇಳೆ ಬಾಂಬ್‌ ಸ್ಪೋಟ; 100ಕ್ಕೂ ಹೆಚ್ಚು ಸಾವು

ಇಂದು ( ಜನವರಿ 3 ) ಇರಾನ್‌ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್‌ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು.

ಇದನ್ನೇ ಗುರಿಯಾಗಿಸಿ ಬಾಂಬ್‌ ಸ್ಪೋಟ ನಡೆಸಲಾಗಿದ್ದು, ಖಾಸಿಂ ಸುಲೇಮಾನಿ ಸಮಾಧಿ ಸ್ಥಳದಲ್ಲಿ ಎರಡು ಬಾರಿ ಬಾಂಬ್‌ ಸ್ಪೋಟಗೊಂಡಿದೆ. ಸದ್ಯ ಸಾವಿನ ಸಂಖ್ಯೆ 100 ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಸದ್ಯ ಈ ಬಾಂಬ್‌ ಸ್ಪೋಟದಿಂದ ಸಾವಿಗೀಡಾದವರ ಹಾಗೂ ರಕ್ಷಣಾ ಕಾರ್ಯ ನಡೆಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇನ್ನು ಇರಾನ್‌ನ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ 20220ರ ಜನವರಿ 3ರಂದು ಬಾಗ್ದಾದ್‌ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಅಮೆರಿಕಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದರು.

andolana

Share
Published by
andolana
Tags: Iran

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

2 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

4 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

4 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

4 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

4 hours ago