ನವದೆಹಲಿ : ಇಸ್ರೇಲ್ ಮತ್ತು ಫೆಲೆಸ್ತೀನ್ ನ ಹಮಾಸ್ ನಡುವೆ ಸಂಘರ್ಷ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ಆರಂಭಗೊಂಡಿದೆ.
‘ಆಪರೇಷನ್ ಅಜಯ್’ ಕಾರ್ಯಾಚರಣೆಯಡಿಯಲ್ಲಿ ಇಸ್ರೇಲ್ನಿಂದ ಹೊರಟ ಮೊದಲ ವಿಮಾನದಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನವದೆಹಲಿಗೆ ಬಂದಿಳಿದ ಒಟ್ಟು 212 ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ. ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು.
ಈ ವಿಮಾನದಲ್ಲಿ ಆಗಮಿಸಿದ ಕನ್ನಡಿಗರನ್ನು ಕರ್ನಾಟಕ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ರಾಜ್ಯ ಸರ್ಕಾರದ ಪರವಾಗಿ ಬರಮಾಡಿಕೊಂಡು ಕುಶಲೋಪರಿ ವಿಚಾರಿಸಿದರು.





