ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ

ನವದೆಹಲಿ : ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿ ಹಿರಿಯ ರಾಜತಾಂತ್ರಿಕ ಅಧಿಕಾರಿ ರುಚಿರಾ ಕಾಂಬೋಜ್ ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದೆ ಇದ್ದ ಟಿ.ಎಸ್. ತಿರುಮೂರ್ತಿ ಅವರ ಸ್ಥಾನ ತೆರವಾದ ಕಾರಣ ರುಚಿರಾ ಕಾಂಬೋಜ್ ಅವರನ್ನು ನೇಮಿಸಲಾಗಿದೆ. ಇವರು ಪ್ರಸ್ತುತ ಭೂತಾನ್ ನಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.