ಬೆಂಗಳೂರು: ಟಾಲಿವುಡ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಸಿನಿಮಾದ ಗುರುವಾರದ ಮುಂಜಾನೆ ಶೋಗಳು ರದ್ದಾಗಿವೆ.
ಕರ್ನಾಟಕ ಸಿನಿಮಾ ರೆಗ್ಯುಲೇಷನ್ ಕಾಯ್ದೆಯಡಿ ಬೆಳಗ್ಗೆ 6:30ರ ಮೊದಲು ಹಾಗೂ ರಾತ್ರಿ 10:30 ರ ನಂತರ ಸಿನಿಮಾ ಪ್ರದರ್ಶನಕ್ಕೆ ಅವಕಾಶವಿಲ್ಲ. ಹೀಗಾಗಿ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಬೆಂಗಳೂರಿನ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.
ಈ ಬೆನ್ನಲ್ಲೇ ನಿಯಮ ಉಲ್ಲಂಘಿಸುವ ಚಿತ್ರಮಂದಿರಗಳ ವಿರುದ್ದ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದರು.
ಬಳಿಕ ಕರ್ನಾಟಕದಲ್ಲಿ ಪುಷ್ಪ-2 ಸಿನಿಮಾದ ಬುಧವಾರದ ಮಿಡ್‌ನೈಟ್ ಶೋ ಹಾಗೂ ಗುರುವಾರ ಮುಂಜಾನೆ ಶೋಗಳನ್ನು ರದ್ದಗೊಳಿಸಲಾಗದೆ. ಈ ಬಗ್ಗೆ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.