ಅಂತಾರಾಷ್ಟ್ರೀಯ

ಪುಷ್ಪ 2| ಮಿಡ್‌ನೈಟ್‌, ಮುಂಜಾನೆ ಶೋ ರದ್ದು

ಬೆಂಗಳೂರು: ಟಾಲಿವುಡ್‌ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಸಿನಿಮಾದ ಗುರುವಾರದ ಮುಂಜಾನೆ ಶೋಗಳು ರದ್ದಾಗಿವೆ.

ಕರ್ನಾಟಕ ಸಿನಿಮಾ ರೆಗ್ಯುಲೇಷನ್‌ ಕಾಯ್ದೆಯಡಿ ಬೆಳಗ್ಗೆ 6:30ರ ಮೊದಲು ಹಾಗೂ ರಾತ್ರಿ 10:30 ರ ನಂತರ ಸಿನಿಮಾ ಪ್ರದರ್ಶನಕ್ಕೆ ಅವಕಾಶವಿಲ್ಲ. ಹೀಗಾಗಿ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌ ಬೆಂಗಳೂರಿನ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.

ಈ ಬೆನ್ನಲ್ಲೇ ನಿಯಮ ಉಲ್ಲಂಘಿಸುವ ಚಿತ್ರಮಂದಿರಗಳ ವಿರುದ್ದ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನಗರ ಪೊಲೀಸ್‌ ಆಯುಕ್ತರಿಗೆ ಮತ್ತು ಬೆಂಗಳೂರು ಗ್ರಾಮಾಂತರ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದರು.

ಬಳಿಕ ಕರ್ನಾಟಕದಲ್ಲಿ ಪುಷ್ಪ-2 ಸಿನಿಮಾದ ಬುಧವಾರದ ಮಿಡ್‌ನೈಟ್‌ ಶೋ ಹಾಗೂ ಗುರುವಾರ ಮುಂಜಾನೆ ಶೋಗಳನ್ನು ರದ್ದಗೊಳಿಸಲಾಗದೆ. ಈ ಬಗ್ಗೆ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

26 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

36 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

48 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

54 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

1 hour ago