ಜಮ್ಮು-ಕಾಶ್ಮೀರ : ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮು-ಕಾಶ್ಮೀರ : ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಭದ್ರತಾ ಪಡೆಗಳೊಂದಿಗಿನ ಎನ್‌ ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಹೀಗಾಗಿ ಕಳೆದ 24 ಗಂಟೆಗಳಲ್ಲಿ ಈವರೆಗೆ ಒಟ್ಟು ಹತರಾದ ಉಗ್ರರ ಸಂಖ್ಯೆ 7 ಕ್ಕೆ ಏರಿದೆ.

ಉತ್ತರ ಕಾಶ್ಮೀರದ ಕಪ್ಪಾರ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಮತ್ತೆ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹತರಾದ ಉಗ್ರರ ಬಳಿಯಿದ್ದ ಮದ್ದುಗುಂಡುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ. ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್‍ನಲ್ಲಿ ಅಪರಿಚಿತ ಉಗ್ರನೊಬ್ಬ ಬಲಿಯಾಗಿದ್ದಾನೆ ಪುಲ್ವಾಮಾದ ಚತ್ಪೋರಾದಲ್ಲಿ ಎರಡು ಕಡೆಯ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರಗಾಮಿಹತನಾಗಿದ್ದು , ಕೊನೆಯದಾಗಿ ವರದಿಗಳು ಬಂದಾಗ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.