ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್‌ಗಳು ದಾಳಿ ನಡೆಸಿದ್ದಾರೆ.
ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್‌ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ವಾಯು ಪಡೆ ತಿಳಿಸಿದೆ.
ಭಾರೀ ಶಸ್ತ್ರಸಜ್ಜಿತರಾದ ಐದಾರು ಜನರ ಗುಂಪು ಶನಿವಾರ ಮುಂಜಾನೆ ತೀವ್ರ ಸ್ವರೂಪದ ದಾಳಿ ಆರಂಭಿಸಿತ್ತು. ಇದರಿಂದ ಎರಡೂ ಕಡೆಯಿಂದಲೂ ಗುಂಡಿನ ಚಕಮಕಿ ನಡೆಯಿತು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದು, ದಾಳಿ ವಿಫಲಗೊಳಿಸಲಾಗಿದೆ ಎಂದು ಪಿಎಎಫ್ ತಿಳಿಸಿದೆ.
ಶನಿವಾರ ನಡೆದ ಉಗ್ರರ ದಾಳಿಯು ವಿಫಲವಾಗಿದೆ. ಇದಕ್ಕೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿರುವ ಸೇನೆ, ಉಗ್ರರ ದಾಳಿಯನ್ನು ತಡೆದು ಆಸ್ತಿ ಮತ್ತು ಸೇನೆಯ ಸುರಕ್ಷತೆ ಬಗ್ಗೆ ಖಾತ್ರಿಪಡಿಸಿದೆ. ಪಾಕ್ ಸೇನೆಯು ಅಸಾಧಾರಣ ಪ್ರತಿಭೆ ಪ್ರದರ್ಶಿಸುವ ಮೂಲಕ ಮೂವರು ಉಗ್ರರನ್ನು ವಾಯುನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಹೊಡೆದುರುಳಿಸಲಾಗಿದೆ. ಉಳಿದ ಮೂವರು ಉಗ್ರರನ್ನು ಪ್ರತ್ಯೇಕಗೊಳಿಸಲಾಗಿದೆ ಎಂದು ತಿಳಿಸಿದೆ.
ಆತ್ಮಹತ್ಯಾ ಬಾಂಬರ್‌ಗಳ ದಾಳಿಯಲ್ಲಿ ವಾಯುನೆಲೆಯಲ್ಲಿ ನಿಲ್ಲಿಸಲಾಗಿದ್ದ ಮೂರು ಯುದ್ಧ ವಿಮಾನಗಳು ಹಾನಿಯಾಗಿವೆ. ಕೆಲ ಇಂಧನ ಟ್ಯಾಂಕರ್‌ಗಳು ಕೂಡ ಸುಟ್ಟು ಭಸ್ಮವಾಗಿವೆ ಎಂದು ಸೇನೆ ಹೇಳಿಕೊಂಡಿದೆ. ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ (ಟಿಜೆಪಿ) ಭಯೋತ್ಪಾದಕ ಸಂಘಟನೆಯು ಈ ದಾಳಿ ಹೊಣೆ ಹೊತ್ತುಕೊಂಡಿದೆ. ಸದ್ಯ ದಾಳಿ ಕುರಿತ ವೀಡಿಯೋಗಳು ಜಾಲತಾಣದಲ್ಲಿ ಹರಿದಾಡುತ್ತಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…