ಕಾಬೂಲ್ : ಪಶ್ಚಿಮ ಅಫ್ಘಾನಿಸ್ತಾನ ಭೂಕಂಪದಲ್ಲಿ ಮೃತಪಟ್ಟಿರುವವರ ಸಂಖ್ಯೆ ಭಾನುವಾರ ತೀಕ್ಷ್ಣ ಏರಿಕೆ ಕಂಡಿದ್ದು, 2,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭೂಕಂಪದ ತೀವ್ರತೆಗೆ ಹಲವಾರು ಗ್ರಾಮಗಳು ನೆಲಸಮಗೊಂಡಿವೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶನಿವಾರ 6.3 ತೀವ್ರತೆಯಲ್ಲಿ ಭೂಕಂಪ ಅಪ್ಪಳಿಸಿದ್ದು, ಇದಾದ ನಂತರ ಎಂಟು ಬಾರಿ ಲಘು ಭೂಕಂಪ ಸಂಭವಿಸಿದ್ದರಿಂದ ಹೆರಾತ್ ನ ಪ್ರಾಂತೀಯ ರಾಜಧಾನಿಯ ನೈರುತ್ಯ ಭಾಗದಿಂದ 30 ಕಿಮೀ (19 ಮೈಲುಗಳು) ದೂರವಿರುವ ಗ್ರಾಮಗಳಿಗೆ ತಲುಪಲು ರಕ್ಷಣಾ ಪಡೆಗಳು ಹರಸಾಹಸ ಪಡಬೇಕಾಯಿತು.
ಭೂಕಂಪದಲ್ಲಿ ಸಂಭವಿಸಿರುವ ಹಾನಿಯು ಇದೀಗ ಸ್ಪಷ್ಟವಾಗುತ್ತಿದ್ದು, “ದುರದೃಷ್ಟವಶಾತ್, ಗಾಯಾಳುಗಳ ಸಂಖ್ಯೆ ತೀರಾ ಹೆಚ್ಚಿದೆ” ಎಂದು ಉಪ ಸರ್ಕಾರಿ ವಕ್ತಾರ ಬಿಲಾಲ್ ಕರಿಮಿ ತಿಳಿಸಿದ್ದಾರೆ.
ಶನಿವಾರ ಸರಿರಾತ್ರಿಯಲ್ಲಿ ಝಿಂದಾ ಜನ್ ಜಿಲ್ಲೆಯ ಸರ್ಬೊಲ್ಯಾಂಡ್ ಗ್ರಾಮದಲ್ಲಿ ಭೂಕಂಪದ ಕೇಂದ್ರಬಿಂದುವಿನ ಬಳಿ ಭೂಮಿಯು ಐದು ಗಂಟೆಗಿಂತ ಹೆಚ್ಚು ಕಾಲ ಕಂಪಿಸಿದ್ದರಿಂದ ಹತ್ತಾರು ಮನೆಗಳು ನಾಶವಾಗಿರುವುದನ್ನು ಎಎಫ್‌ಪಿ ಸುದ್ದಿ ಸಂಸ್ಥೆಯ ವರದಿಗಾರರು ಗಮನಿಸಿದ್ದಾರೆ ಎಂದು ಹೇಳಲಾಗಿದೆ.
ಕಳೆದ ವರ್ಷ ಜೂನ್ ತಿಂಗಳಲ್ಲಿ 5.9 ತೀವ್ರತೆಯಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 1,000ಕ್ಕಿಂತ ಹೆಚ್ಚು ಮಂದಿ ಮೃತಪಟ್ಟು, ಸಹಸ್ರಾರು ಮಂದಿ ತಮ್ಮ ನಿವಾಸಗಳನ್ನು ಕಳೆದುಕೊಂಡಿದ್ದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…