Mysore
22
light rain

Social Media

ಭಾನುವಾರ, 02 ಆಗಸ್ಟ್ 2026
Light
Dark

ಇಸ್ರೇಲ್ ಮೇಲೆ ಭಯೋತ್ಪಾದಕ ದಾಳಿ ಆಘಾತ ತಂದಿದೆ: ಪ್ರಧಾನಿ ಮೋದಿ

ಜೆರುಸಲೇಂ: ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ ಕನಿಷ್ಠ 22 ಮಂದಿ ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಭಾರತವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ಮುಗ್ದ ಜನರು ಬಲಿಯಾಗಿದ್ದಾರೆ ಅವರಿಗೆ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಯುದ್ಧ ಘೋಷಿಸಿದ್ದಾರೆ. ಇಂದು ಬೆಳಗಿನ ಜಾವದಲ್ಲಿ ಗಾಜಾದಿಂದ ಹಮಾಸ್ ಉಗ್ರಗಾಮಿಗಳು ನಡೆಸಿದ ಹಠಾತ್ ದಾಳಿಯು ಕನಿಷ್ಠ 22 ಇಸ್ರೇಲಿಗಳನ್ನು ಬಲಿ ತೆಗೆದುಕೊಂಡಿದೆ.

https://x.com/narendramodi/status/1710614655620534296?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!