ಅಂತಾರಾಷ್ಟ್ರೀಯ

ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಟ್ರಂಪ್‌ ಅನರ್ಹ: ಕೊಲೊರಾಡೋ ಕೋರ್ಟ್

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಕೊಲೊರಾಡೋ ಕೋರ್ಟ್ ಅನರ್ಹಗೊಳಿಸಿದೆ.

ಕ್ಯಾಪಿಟಲ್‌ ಹಿಲ್‌ ದಂಗೆಯಲ್ಲಿ ಟ್ರಂಪ್‌ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. ಆದೇಶವನ್ನು ಪ್ರಶ್ನಿಸಲು ಜ.4ರವರೆಗೆ ಮೇಲ್ಮನವಿ ಸಲ್ಲಿಸಲು ಟ್ರಂಪ್‌ಗೆ ಅವಕಾಶ ನೀಡಲಾಗಿದೆ.

ಅಮೆರಿಕದ ಇತಿಹಾಸದಲ್ಲಿ ಮಾಜಿ ಅಧ್ಯಕ್ಷರೊಬ್ಬರನ್ನು ಚುನಾವಣೆಯಿಂದಲೇ ಅನರ್ಹಗೊಳಿಸಿದ್ದು ಇದೇ ಮೊದಲು. ಈ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಟ್ರಂಪ್‌ ವಕ್ತಾರರು, ಇದೊಂದು ಸಂಪೂರ್ಣ ದೋಷಪೂರಿತ ಆದೇಶ. ಈ ತೀರ್ಪನ್ನು ಪ್ರಶ್ನಿಸಿ ಅಮೆರಿಕ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಏನಿದು ಪ್ರಕರಣ?
2021ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಹೇಳಿ ಟ್ರಂಪ್‌ ಪ್ರಚೋದನಕಾರಿ ಭಾಷಣ ಮಾಡಿದ್ದರು. ಭಾಷಣದಿಂದ ಪ್ರಭಾವಿತರಾಗಿ 2 ಸಾವಿರಕ್ಕೂ ಹೆಚ್ಚು ಟ್ರಂಪ್‌ ಬೆಂಬಲಿಗರು ಜನವರಿ 6 ರಂದು ಅಮೆರಿಕದ ಸಂಸತ್‌ ಕಟ್ಟಡ ಅಥವಾ ಕ್ಯಾಪಿಟಲ್‌ ಹಿಲ್‌ ಮೇಲೆ ನುಗ್ಗಿ ದಾಂಧಲೆ ನಡೆಸಿದ್ದರು ಇದರಿಂದಾಗಿ ವಾಷಿಂಗ್ಟನ್‌ನಲ್ಲಿ 15 ದಿನ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಈ ಸಂಬಂಧ ಟ್ರಂಪ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

andolanait

Share
Published by
andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago