ಹಿಂದಿ ದಿವಸ ಆಚರಣೆ ವಿರೋಧಿಸಿ ಜೆಡಿಎಸ್‌ನಿಂದ ಪ್ರತಿಭಟನೆ

ಬೆಂಗಳೂರು: ಹಿಂದಿ ದಿವಸ ಆಚರಣೆಯನ್ನು ವಿರೋಧಿಸಿ ಸೆ.14ರಂದು ಜೆಡಿಎಸ್‌ ಪ್ರತಿಭಟನೆ ನಡೆಸಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಜೆಪಿ ಭವನದಲ್ಲಿ ಪ್ರತಿಭಟನೆ ಕೈಗೊಳ್ಳಲಿದೆ.

ಹಿಂದಿ ದಿವಸ ಆಚರಣೆ ವಿರುದ್ಧ ಅನೇಕ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಕರ್ನಾಟಕ ರಾಜ್ಯದಲ್ಲಿ ಕನ್ನಡಕ್ಕಷ್ಟೇ ಆದ್ಯತೆ ನೀಡಬೇಕು ಎಂಬ ಆಶಯವನ್ನು ಪ್ರತಿಪಾದಿಸಿವೆ.

ರಾಜ್ಯದ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ ಕೂಡ ಇದೇ ನಿಲುವನ್ನು ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಕರೆ ನೀಡಿದೆ. ಆ ಮೂಲಕ ರಾಜ್ಯದಲ್ಲಿ ರಾಜಕೀಯವಾಗಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಮುಂದಾಗಿದೆ.

× Chat with us