ದುಂದು ವೆಚ್ಚಕ್ಕೆ ಕಡಿವಾಣ: ಹಾರ, ಶಾಲು, ಹಣ್ಣು, ನೆನಪಿನ ಕಾಣಿಕೆ ಬೇಡ: ಕನ್ನಡ ಪುಸ್ತಕ ನೀಡಿ- ಸರ್ಕಾರ

ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ವಸ್ತುಗಳಿಗೆ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಈ ಆದೇಶ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೂ ಅನ್ವಯಿಸಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.