ಕೋವಿಡ್‌ ಹಿನ್ನೆಲೆ ಶಾಲೆಗಳಲ್ಲಿ ಸರಳ ಗಣರಾಜ್ಯೋತ್ಸವ ಆಚರಣೆಗೆ ಸರ್ಕಾರ ಸೂಚನೆ

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಸರಳವಾಗಿ ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ರಾಜ್ಯ ಶಿಕ್ಷಣ ಇಲಾಖೆ ಶಾಲೆಗಳಿಗೆ ಸೂಚನೆ ನೀಡಿದೆ.

ಇನ್ನು ಮತ್ತೊಂದೆಡೆ ಗಣರಾಜ್ಯೋತ್ಸವ ಹಿನ್ನೆಲೆ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರ ಸಚಿವರು, ಡಿಸಿಗಳ ನೇಮಕ ಮಾಡಿದೆ. ಆಯಾ ಜಿಲ್ಲೆಯ ಉಸ್ತುವಾರಿಗಳಿಂದ ಧ್ವಜಾರೋಹಣ ಮಾಡಲು ಸೂಚಿಸಿದ್ದು ಗದಗ, ಬೀದರ್, ಹಾಸನದಲ್ಲಿ ಡಿಸಿಗಳಿಂದ ಧ್ವಜಾರೋಹಣಕ್ಕೆ ಸೂಚಿಸಲಾಗಿದೆ. ಒಟ್ಟು ಒಟ್ಟು 30 ಜಿಲ್ಲೆಗಳ ಪೈಕಿ 27 ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿಗಳಿಂದ ಧ್ವಜಾರೋಹಣಕ್ಕೆ ಆದೇಶಿಸಿದ್ದು ಹಾಸನ, ಗದಗ, ಬೀದರ್ ಜಿಲ್ಲೆಯಲ್ಲಿ ಮಾತ್ರ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣಕ್ಕೆ ಸೂಚಿಸಲಾಗಿದೆ.