ಕೊಡಗು: ಸೆ.17ರಿಂದ ಶಾಲಾ-ಕಾಲೇಜು ಪುನಾರಂಭಕ್ಕೆ ಗ್ರೀನ್‌ ಸಿಗ್ನಲ್

ಕೊಡಗು: ಜಿಲ್ಲೆಯಲ್ಲಿ ಸೆ.17ರಿಂದ ಶಾಲಾ-ಕಾಲೇಜು ಪುನಾರಂಭಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ.

9, 10 ಹಾಗೂ ಪಿಯುಸಿ ತರಗತಿ ಆರಂಭವಾಗಲಿದೆ. ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆ ಈ ಕ್ರಮ‌ ಕೈಗೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಶಿಕ್ಷಕರಿಗೆ ವ್ಯಾಕ್ಸಿನೇಷನ್‌ ಕಡ್ಡಾಯ. ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು. ಶಾಲೆ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಇತರೆ ತರಗತಿಗಳ ಪುನಾರಂಭಕ್ಕೆ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆ ಶಿಕ್ಷಕರಿಗೆ ಶೇ. 100 ವ್ಯಾಕ್ಸಿನೇಷನ್‌ ಆಗಿದೆ. ಖಾಸಗಿ ಶಾಲೆಗಳಲ್ಲಿ ಇನ್ನೂ ಬಾಕಿಯಿದೆ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಲು ಸೂಚನೆ ನೀಡಲಾಗಿದೆ.

× Chat with us