ಚಾಮರಾಜನಗರ: ಕಾಡಾನೆ ತುಳಿದು ಪಾದಚಾರಿ ಸಾವು!

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಪಾದಚಾರಿಯೊಬ್ಬರು ಆನೆ ತುಳಿತಕ್ಕೆ ಬಲಿಯಾಗಿರುವ ಚಾಮರಾಜನಗರ ತಾಲ್ಲೂಕಿನ ದೊಡ್ಡಮೂಡಹಳ್ಳಿ ಬಳಿ ನಡೆದಿದೆ.

ದೊಡ್ಡಮೂಡಹಳ್ಳಿ ಗ್ರಾಮದ ಚಾಟಿನಿಂಗಯ್ಯ (52) ಆನೆ ತುಳಿತಕ್ಕೆ ಬಲಿಯಾದವರು. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

× Chat with us