ಹುಣಸೂರು: ಧರ್ಮಾಪುರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ, ಸಂಬಂಧಿಯಿಂದಲೇ ಕೊಲೆ ಶಂಕೆ!

ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಣಸೂರು ತಾಲ್ಲೂಕಿನ ಧರ್ಮಾಪುರ ಗ್ರಾಮದಲ್ಲಿ ನಡೆದಿದೆ.

ದೊಡ್ಡರಾಜ ನಾಯ್ಕ (48) ಕೊಲೆಯಾದವರು.

ಸಂಬಂಧಿ‌ ಕೆಂಡನಾಯ್ಕ ಕೊಲೆ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ. ಆರೋಪಿ ಕೆಂಡನಾಯ್ಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

× Chat with us