ಐವರು ಕಳ್ಳರನ್ನು ಹಿಡಿದ ಮಂಡ್ಯ ಪೊಲೀಸರು

ಮಂಡ್ಯ : ಐವರು ಅಂತರ ಜಿಲ್ಲಾ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ 6 ಲಕ್ಷ ರೂ. ಮೌಲ್ಯದ 11 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳದೆ ಜ. 24ರಂದು ಖಚಿತ ಮಾಹಿತಿ ಮೇರೆಗೆ ವಾಹನ ಅಡ್ಡಗಟ್ಟಿ ತಪಾಸಣೆ ಮಾಡಿದ ವೇಳೆ ಆರೋಪಿಯೊಬ್ಬ ದಾಖಲಾತಿ ಇಲ್ಲದ ವಾಹನದಲ್ಲಿ ಹೋಗುತ್ತಿದ್ದನ್ನು ಪತ್ತೆ ಹಚ್ಚಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ ವೇಳೆ ಐದು ಮಂದಿ ಆರೋಪಿಗಳು ದ್ವಿಚಕ್ರ ವಾಹನ ಕಳವು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತ ನೀಡಿದ ಸುಳಿವಿನ ಮೇರೆಗೆ ಇತರೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ 6 ಲಕ್ಷ ರೂ. ಮೌಲ್ಯದ 11 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ಮಂಡ್ಯ, ಮದ್ದೂರು, ಚನ್ನಪಟ್ಟಣ, ಹಗಲೂರು, ಬನ್ನೂರು ಸೇರಿದಂತೆ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.

ಜಿಲ್ಲಾ ಪೊಲೀಸ್ ಅಧೀಕ್ಷ ಎನ್. ಯತೀಶ್, ಎಎಸ್ಪಿ ವೇಣುಗೋಪಾಲ್, ಡಿವೈಎಸ್ಪಿ ಟಿ. ಮಂಜುನಾಥ್ ಮಾರ್ಗದರ್ಶನದಲ್ಲಿ ಪಿಐ ಆನಂದಗೌಡ ಇತರೆ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.