ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪಸಿಂಹ ಮತ್ತೆ ವಾಗ್ದಾಳಿ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ ಪರಿಸ್ಥಿತಿ ಕುರಿತು ಮಾತನಾಡಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪಸಿಂಹ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ, ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಾಪಸಿಂಹ ಹೊಗಳಿದ್ದಾರೆ.

ನಗರದಲ್ಲಿ ಹೇಳಿಕೆ ನೀಡಿರುವ ಪ್ರತಾಪಸಿಂಹ, ʻಮೈಸೂರಿನಲ್ಲಿ ಕೆಟ್ಟ ಪರಿಸ್ಥಿತಿ ಇದೆ ಎಂದು ಒಂದು ತಿಂಗಳ ಹಿಂದೆಯೇ ಹೇಳಿದ್ದೆ, ವ್ಯವಸ್ಥಿತ ಯೋಜನೆ ರೂಪಿಸದ ಕಾರಣ ಸಾಕಷ್ಟು ಸಾವು ನೋವು ಆದವು. ಮೇ ತಿಂಗಳೊಂದರಲ್ಲೇ ಒಂದು ಸಾವಿರ ಮಂದಿ ಮೃತಪಟ್ಟಿದ್ದಾರೆʼ ಎಂದು ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಇಂದಿಗೂ ಲಾಕ್‌ಡೌನ್ ಮುಂದುವರಿದಿದೆ. ಇದರಿಂದ ಉದ್ಯಮದ ಮೇಲೆ ಸಾಕಷ್ಟು ಒಡೆತ ಬಿದ್ದಿದೆ. ಮುಂದಿನ ದಿನಗಳಲ್ಲಿ ಪಾಸಿಟಿವಿಟಿ ರೇಟ್ ಶೇ 5ಕ್ಕೆ ತರಲು ಶ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.