ಮೈಸೂರು ನಗರ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು.

ಪ್ರೊ.ಭಾಷ್ಯಂ ಸ್ವಾಮೀಜಿ, ಬಿ.ಎಸ್.ನಾಗಭೂಷಣ ಅತ್ರಿ, ಬ್ರಹ್ಮಕುಮಾರಿ ಲಕ್ಷ್ಮೀ ಜೀ, ಡಾ.ಸಿ.ಸೋಮಶೇಖರ್, ಕೆ.ಬಿ.ಲಿಂಗರಾಜು, ಸತೀಶ್ ಕುಮಾರ್ ಡಿ. ಕಗ್ಗೆರೆ, ಶಿವಶಂಕರ ಟೋಕರೆ ಮತ್ತು ಎಸ್.ಶಿವಕುಮಾರ್‌ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

2021–22ನೇ ಜನವರಿಯಿಂದ 2023–24ರ ಜನವರಿ ಆವೃತ್ತಿಗೆ ಒಟ್ಟು 10,623 ಹಾಗೂ 2013-14 ಮತ್ತು 2014–15ನೇ ಶೈಕ್ಷಣಿಕ ಸಾಲಿನ ಸ್ನಾತಕ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳ ಒಟ್ಟು 30,515 ಮಂದಿಗೆ ಪದವಿ ಪ್ರದಾನ ಮಾಡಲಾಯಿತು.

2021–22ನೇ ಜನವರಿಯಿಂದ 2023–24ರ ಜನವರಿವರೆಗೆ 14,069 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 10,623 ಮಂದಿ ತೇರ್ಗಡೆಯಾಗಿದ್ದು, ಶೇ 75.50ರಷ್ಟು ಫಲಿತಾಂಶ ಬಂದಿದೆ.

ಇವರಲ್ಲಿ 3,987 ಪುರುಷರು ಹಾಗೂ 6,704 ಮಹಿಳೆಯರಿದ್ದು, 65 ಚಿನ್ನದ ಪದಕ, 62 ನಗದು ಬಹುಮಾನಗಳನ್ನು ವಿತರಣೆ ಮಾಡಲಾಯಿತು.

2013–14 ಮತ್ತು 2014–15ನೇ ಶೈಕ್ಷಣಿಕ ಸಾಲಿನ ಸ್ನಾತಕ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಒಟ್ಟು 64,102 ಮಂದಿ ಪರೀಕ್ಷೆ ತೆಗೆದುಕೊಂಡಿದ್ದರು. ಅವರಲ್ಲಿ 30,515 ಮಂದಿ ಉತ್ತೀರ್ಣರಾಗಿದ್ದು, ಶೇ 47.60ರಷ್ಟು ಫಲಿತಾಂಶ ಬಂದಿದೆ. ಪದವಿ ಪಡೆದವರ ಪೈಕಿ ಮಹಿಳೆಯರೇ ಮೇಲುಗೈ ಸಾಧಿಸಿದ್ದಾರೆ.

ಯುಜಿಸಿ ಮಾನ್ಯತೆ ಸಿಗದಿದ್ದ ಕಾರಣದಿಂದ 2013–14 ಮತ್ತು 2014–15ನೇ ಶೈಕ್ಷಣಿಕ ಸಾಲಿನ ಸ್ನಾತಕ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಿರಲಿಲ್ಲ. ಅವರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 mins ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

23 mins ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

52 mins ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

2 hours ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

2 hours ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

6 hours ago