Mysore
21
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಮೈಸೂರು| ರಾಜ್ಯ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶ: 2578 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಅದ್ಧೂರಿಯಾಗಿ ಜರುಗಿತು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಈ ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚಿನ ಜನರು ಭಾಗಿಯಾಗಿ ಸಮಾವೇಶವನ್ನು ಯಶಸ್ವಿಗೊಳಿಸಿದರು. ಸಮಾವೇಶದಲ್ಲೇ ಬರೋಬ್ಬರಿ 2578 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ರಿಮೋಟ್‌ ಬಟನ್‌ ಒತ್ತುವ ಮೂಲಕ ಚಾಲನೆ ನೀಡಿದರು.

ಸಿಎಂ ತವರು ಜಿಲ್ಲೆಯಲ್ಲಿ ಬೆಂಬಲಿಗರು, ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಮಾಡುವ ಮೂಲಕ ವಿರೋಧಿಗಳು ಹಾಗೂ ಹೈಕಮಾಂಡ್‌ಗೆ ಸಂದೇಶ ರವಾನಿಸಿದರು.

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರಾದ ಜಿ.ಪರಮೇಶ್ವರ್‌, ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್‌, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್‌, ಶಿವರಾಜ್‌ ತಂಗಡಗಿ, ಶಾಸಕರಾದ ಹರೀಶ್‌ ಗೌಡ, ತನ್ವೀರ್‌ ಸೇಠ್‌, ಅನಿಲ್‌ ಚಿಕ್ಕಮಾದು, ಸಂಸದ ಸುನೀಲ್‌ ಬೋಸ್‌ ಸೇರಿದಂತೆ ಎಂಎಲ್‌ಸಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

Tags:
error: Content is protected !!