ಮೈಸೂರು: ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಅದ್ಧೂರಿಯಾಗಿ ಜರುಗಿತು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚಿನ ಜನರು ಭಾಗಿಯಾಗಿ ಸಮಾವೇಶವನ್ನು ಯಶಸ್ವಿಗೊಳಿಸಿದರು. ಸಮಾವೇಶದಲ್ಲೇ ಬರೋಬ್ಬರಿ 2578 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ರಿಮೋಟ್ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.
ಸಿಎಂ ತವರು ಜಿಲ್ಲೆಯಲ್ಲಿ ಬೆಂಬಲಿಗರು, ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಮಾಡುವ ಮೂಲಕ ವಿರೋಧಿಗಳು ಹಾಗೂ ಹೈಕಮಾಂಡ್‌ಗೆ ಸಂದೇಶ ರವಾನಿಸಿದರು.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಶಿವರಾಜ್ ತಂಗಡಗಿ, ಶಾಸಕರಾದ ಹರೀಶ್ ಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಸಂಸದ ಸುನೀಲ್ ಬೋಸ್ ಸೇರಿದಂತೆ ಎಂಎಲ್‌ಸಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…