ಮೈಸೂರು: ನಾಳೆಯಿಂದ ಮೂರು ದಿನಗಳ ಕಾಲ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಪ್ರಭುಗಳಿಗೆ ಶಾಕಾ ಹಾಗೂ ಫಲ ಸಮರ್ಪಣೆ ಮಾಡಲಾಯಿತು. ಬಳಿಕ ರಾಯರಿಗೆ ಜ್ಯೋತಿ ಬೆಳಗಿಸಿ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ರಾಘವೇಂದ್ರ ಕುಲಕರ್ಣಿ ಜಗನ್ನಾಥಾಚಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವಕ್ಕೆ ಮಠದಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಲಾಗಿದ್ದು, ಮಠವನ್ನು ವಿಧ ವಿಧದ ಹೂವುಗಳಿಂದ ಅಲಂಕರಿಸಲಾಗಿದೆ.
ಮೂರು ದಿನಗಳು ಕೂಡ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹಲವಾರು ಸಾರ್ವಜನಿಕರು ಭೇಟಿ ನೀಡಲಿದ್ದು, ಅವರೆಲ್ಲರಿಗೂ ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…