Mysore
13
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಮೈಸೂರಿನಲ್ಲಿ 5000 ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 5000 ಉದ್ಯೋಗ ಸೃಷ್ಟಿಯಾಗಲಿದ್ದು, ಮಹಿಳಾ ಉದ್ಯೋಗಿಗಳಿಗೆ ಅವಕಾಶ ಇರಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಮೈಸೂರಿನಲ್ಲಿ ಸೆಮಿಕಂಡಕ್ಟರ್‌, ಎಲಿಮೆಂಟ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಮೈಸೂರು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿವೆ. ಇದರಿಂದ ಸುಮಾರು 600 ಕೋಟಿ ರೂಗಳ ಹೊಸ ಹೂಡಿಕೆ ಹರಿದು ಬರುತ್ತಿದೆ ಎಂದರು.

ಮೈಸೂರನ್ನು ಉದ್ಯೋಗ ಶೀಲ ನಗರವನ್ನಾಗಿ ಮಾಡಲು ಮಾಹಿತಿ ತಂತ್ರಜ್ಞಾನ ಇಲಾಖೆ ಯೋಜಿಸಿದೆ. ಸುಮಾರು 150 ಎಕರೆಗಳಷ್ಟು ಜಾಗದಲ್ಲಿ ಕ್ಲಸ್ಟರ್‌ ಸ್ಥಾಪಿಸುವ ಗುರಿ ಹೊಂದಲಾಗಿದೆ.

ಇದರಿಂದ 5000 ಹೊಸ ಉದ್ಯೋಗ ಸೃಷ್ಟಿಯಾಗಲಿದ್ದು, ಅದರಲ್ಲಿಯೂ ಮಹಿಳಾ ಉದ್ಯೋಗಿಗಳಿಗೆ ಅವಕಾಶ ಸಿಗಲಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಶ್ರಮ ವಹಿಸುತ್ತಿದೆ. ಹಾಗಾಗಿ ಯುವಕರು ಭಯ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಭರವಸೆ ನೀಡಿದರು.

 

 

Tags:
error: Content is protected !!