ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 5000 ಉದ್ಯೋಗ ಸೃಷ್ಟಿಯಾಗಲಿದ್ದು, ಮಹಿಳಾ ಉದ್ಯೋಗಿಗಳಿಗೆ ಅವಕಾಶ ಇರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್‌ಮೆಂಟ್ ಸಿಸ್ಟಂ ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಮೈಸೂರು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿವೆ. ಇದರಿಂದ ಸುಮಾರು 600 ಕೋಟಿ ರೂಗಳ ಹೊಸ ಹೂಡಿಕೆ ಹರಿದು ಬರುತ್ತಿದೆ ಎಂದರು.
ಮೈಸೂರನ್ನು ಉದ್ಯೋಗ ಶೀಲ ನಗರವನ್ನಾಗಿ ಮಾಡಲು ಮಾಹಿತಿ ತಂತ್ರಜ್ಞಾನ ಇಲಾಖೆ ಯೋಜಿಸಿದೆ. ಸುಮಾರು 150 ಎಕರೆಗಳಷ್ಟು ಜಾಗದಲ್ಲಿ ಕ್ಲಸ್ಟರ್ ಸ್ಥಾಪಿಸುವ ಗುರಿ ಹೊಂದಲಾಗಿದೆ.
ಇದರಿಂದ 5000 ಹೊಸ ಉದ್ಯೋಗ ಸೃಷ್ಟಿಯಾಗಲಿದ್ದು, ಅದರಲ್ಲಿಯೂ ಮಹಿಳಾ ಉದ್ಯೋಗಿಗಳಿಗೆ ಅವಕಾಶ ಸಿಗಲಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಶ್ರಮ ವಹಿಸುತ್ತಿದೆ. ಹಾಗಾಗಿ ಯುವಕರು ಭಯ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಭರವಸೆ ನೀಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…